Thursday, 22 March 2018

ಕನ್ನಡ ಭಾಷೆ ಮತ್ತು ಅಂಕೆಗಳ ಬೆಳವಣಿಗೆ :-

-: ಕನ್ನಡ ಭಾಷೆ ಮತ್ತು ಅಂಕೆಗಳ ಬೆಳವಣಿಗೆ :-   'ಕುಮುದೇಂದು ಮುನಿ' ರಚಿಸಿದ 'ಸಿರಿ ಭೂವಲಯ' ಎಂಬ ಗ್ರಂಥದ ಪ್ರಕಾರ ಕನ್ನಡ ಭಾಷೆ ಒಂದು ಗುಪ್ತಭಾಷೆಯಾಗಿದ್ದಿತು. (ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದಕಾಲದಿಂದ ಕನ್ನಡವೂ ಸೇರಿದಂತೆ ೪ ಗುಪ್ತಭಾಷೆಗಳು ಇದ್ದುವು). ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆಯೆಂದು 'ಕುಮುದೇಂದು ಮುನಿ' ತನ್ನ ಗ್ರಂಥದಲ್ಲಿ ಸಾಬೀತುಪಡಿಸಿದ್ದಾರೆ.   "ಆದಿ ತೀರ್ಥಂಕರ ವೃಷಭದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸುಂದರಿಯರಿಗೆ ಕನ್ನಡ ಅಂಕಾಕ್ಷರಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ 'ಬ್ರಾಹ್ಮೀಲಿಪಿ' ಎಂದು ಅಂಕಲಿಪಿಗೆ 'ಸುಂದರಿ ಲಿಪಿ' ಎಂದು ಹೆಸರಾಗಿದೆ. ಈ ವಿಷಯವನ್ನು ಸಿರಿ ಭೂವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ.

No comments:

Post a Comment